ADVERTISEMENT

ಮಹಾರಾಷ್ಟ್ರ: ನವಾಬ್ ಮಲಿಕ್ ರಾಜೀನಾಮೆಗೆ ಪಟ್ಟು; ದೇವೇಂದ್ರ ಫಡಣವಿಸ್ ವಶಕ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಮಾರ್ಚ್ 2022, 10:13 IST
Last Updated 9 ಮಾರ್ಚ್ 2022, 10:13 IST
ನವಾಬ್ ಮಲಿಕ್ ರಾಜೀನಾಮೆಗಾಗಿ ಬಿಜೆಪಿ ಪ್ರತಿಭಟನೆ (ಐಎಎನ್‌ಎಸ್ ಚಿತ್ರ)
ನವಾಬ್ ಮಲಿಕ್ ರಾಜೀನಾಮೆಗಾಗಿ ಬಿಜೆಪಿ ಪ್ರತಿಭಟನೆ (ಐಎಎನ್‌ಎಸ್ ಚಿತ್ರ)   

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ರಾಜೀನಾಮೆಗಾಗಿ ಬಿಜೆಪಿ ಬಿಗು ಪಟ್ಟು ಹಿಡಿದಿದ್ದು, ಬುಧವಾರ ಭಾರಿ ಪ್ರತಿಭಟನೆ ಹಮ್ಮಿಕೊಂಡಿದೆ.

ಈ ನಡುವೆ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡಣವಿಸ್ ಮತ್ತು ಪಕ್ಷದ ಕಾರ್ಯಕರ್ತರನ್ನು ಮುಂಬೈ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನವಾಬ್ ಮಲಿಕ್ ಅವರನ್ನು ಫೆಬ್ರುವರಿ 23ರಂದು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿತ್ತು. ಬಳಿಕ ಮಾರ್ಚ್ 7ರಂದು ವಿಶೇಷ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.