ಪುಣೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ದೇವಾಲಯವೊಂದರ ಆವರಣಕ್ಕೆ ನೀರು ನುಗ್ಗಿರುವುದು
ಪಿಟಿಐ ಚಿತ್ರ
ಮುಂಬೈ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಮುನ್ನೆಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ, ನಾಸಿಕ್, ಪುಣೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಠಾಣೆ, ರಾಯ್‌ಗಢ, ಮುಂಬೈ, ರತ್ನಗಿರಿ ಸೇರಿದಂತೆ ಸತಾರಾ ಘಾಟ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ಅಂಬಾ, ಕುಂಡಲಿಕಾ, ಪಾತಾಳಗಂಗಾ, ಜಗ್ಬುಡಿ ಸೇರಿದಂತೆ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರಾಯ್‌ಗಢ ಸೇರಿ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈಗಾಗಲೇ ನದಿಪಾತ್ರದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು, ಪ್ರವಾಹದ ಸ್ಥಿತಿ ಎದುರಾಗಿದೆ. ರತ್ನಗಿರಿ ಜಿಲ್ಲೆಯ ಹಲವೆಡೆ ಭೂಕುಸಿತ ಸಂಭವಿಸಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮಹಾರಾಷ್ಟ್ರ ವಿಪತ್ತು ನಿರ್ವಹಣಾ ಪಡೆಯ ಪ್ರಕಾರ 24 ಗಂಟೆಯಲ್ಲಿ ಮುಂಬೈನಲ್ಲಿ ಅತಿ ಹೆಚ್ಚು 142.6 ಮಿಲಿ ಮೀಟರ್ ಮಳೆಯಾಗಿದೆ. ರಾಯ್‌ಗಢದಲ್ಲಿ 134.1 ಎಂಎಂ, ಪಲ್ಗಾರ್‌ನಲ್ಲಿ 120.9 ಎಂಎಂ, ಠಾಣೆಯಲ್ಲಿ 90.3 ಎಂಎಂ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.