ಮುಂಬೈ: ಸಾಂಗ್ಲಿ ಜಿಲ್ಲೆಯ ಇಸ್ಲಾಮ್‌ಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ತಿಳಿಸಿದೆ.
ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ತಿಳಿಸಿದರು.
ರಾಜ್ಯ ಸರ್ಕಾರವು ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಅವರು ವಿಧಾನಸಭೆಗೆ ಮಾಹಿತಿ ನೀಡಿದರು. ಇಂದು ಮಹಾರಾಷ್ಟ್ರದ ಮುಂಗಾರು ಅಧಿವೇಶನ ಮುಕ್ತಾಯವಾಗಲಿದೆ.
ಸ್ಥಳೀಯ ಶಿವ ಪ್ರತಿಷ್ಠಾನ ಇಸ್ಲಾಮ್‌ಪುರದ ಹೆಸರನ್ನು ಈಶ್ವರಪುರ ಎಂದು ಬದಲಾಯಿಸುವಂತೆ ಸಾಂಗ್ಲಿ ಜಿಲ್ಲಾಧಿಕಾರಿಯವರಿಗೆ ಹಲವು ಸಲ ಮನವಿ ಮಾಡಿತ್ತು.
1986ರಿಂದಲೂ ಹೆಸರು ಬದಲಾವಣೆಗೆ ಶಿವಸೇನೆ ಪಕ್ಷ ಸೇರಿದಂತೆ ಹಲವು ಸಂಘಟನೆಗಳು ಬೇಡಿಕೆ ಇಟ್ಟಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.