ADVERTISEMENT

ಮಹಾರಾಷ್ಟ್ರದಲ್ಲಿ 26,538, ಪಶ್ಚಿಮ ಬಂಗಾಳದಲ್ಲಿ 14,022 ಕೋವಿಡ್ ಪ್ರಕರಣಗಳು ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜನವರಿ 2022, 15:52 IST
Last Updated 5 ಜನವರಿ 2022, 15:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. 24 ಗಂಟೆಗಳಲ್ಲಿ 26,538 ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 87,505ಕ್ಕೆ ಜಿಗಿದಿದೆ. ಇದೇ ಅವಧಿಯಲ್ಲಿ 8 ಮಂದಿ ಸೋಂಕಿತರು ಮೃತಪಟ್ಟಿದ್ದು, 5,331 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ.

ಮುಂಬೈ ನಗರವೊಂದರಲ್ಲೇ 15,166 ಪ್ರಕರಣಗಳು ದೃಢಪಟ್ಟಿವೆ.

ಇನ್ನು, ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 797ಕ್ಕೆ ಏರಿದ್ದು, 330 ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ಇತ್ತ, ಗುಜರಾತ್‌ನಲ್ಲಿ ಒಂದೇ ದಿನ 3,350 ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 10,000 ಮೀರಿದೆ ಎಂದು ಎಎನ್‌ಐ ಟ್ವಿಟ್ ಮಾಡಿದೆ. 24 ಗಂಟೆಗಳಲ್ಲಿ 50 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ.

ಪಶ್ಚಿಮ ಬಂಗಾಳದಲ್ಲಿ 24 ಗಂಟೆಗಳಲ್ಲಿ 14,022 ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 17 ಜನರ ಸಾವು ಸಂಭವಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.