ADVERTISEMENT

ಮಹಾರಾಷ್ಟ್ರ: ಕಾಂಗ್ರೆಸ್​ನ ಹಿರಿಯ ನಾಯಕ ಪದ್ಮಾಕರ್ ವಾಲ್ವಿ ಬಿಜೆಪಿಗೆ ಸೇರ್ಪಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮಾರ್ಚ್ 2024, 7:17 IST
Last Updated 13 ಮಾರ್ಚ್ 2024, 7:17 IST
<div class="paragraphs"><p>ಕಾಂಗ್ರೆಸ್​ನ ಹಿರಿಯ ನಾಯಕ ಪದ್ಮಾಕರ್ ವಾಲ್ವಿ ಅವರು  ಬಿಜೆಪಿಗೆ ಸೇರ್ಪಡೆಯಾದರು.</p></div>

ಕಾಂಗ್ರೆಸ್​ನ ಹಿರಿಯ ನಾಯಕ ಪದ್ಮಾಕರ್ ವಾಲ್ವಿ ಅವರು ಬಿಜೆಪಿಗೆ ಸೇರ್ಪಡೆಯಾದರು.

   

ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಸಚಿವ ಪದ್ಮಾಕರ್ ವಾಲ್ವಿ ಅವರು ಇಂದು (ಬುಧವಾರ) ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ್ ಬಾವಾಂಕುಲೆ ಮತ್ತು ಪಕ್ಷದ ಮುಖಂಡ ಅಶೋಕ್ ಚವಾಣ್ ಅವರ ಸಮ್ಮುಖದಲ್ಲಿ ವಾಲ್ವಿ ಅವರು ಬಿಜೆಪಿಗೆ ಸೇರಿದ್ದಾರೆ.

ADVERTISEMENT

ಮಿಲಿಂದ್ ದಿಯೋರಾ ಮತ್ತು ಅಶೋಕ್ ಚವಾಣ್ ನಂತರ ಕಾಂಗ್ರೆಸ್​ನಿಂದ ನಿರ್ಗಮಿಸಿದ ಮೂರನೇ ನಾಯಕರು ಇವರಾಗಿದ್ದಾರೆ. ದಿಯೋರಾ ಏಕನಾಥ ಶಿಂದೆ ನೇತೃತ್ವದ ಶಿವಸೇನೆಗೆ ಸೇರ್ಪಡೆಗೊಂಡರೆ, ಇತ್ತ ಅಶೋಕ್ ಚವಾಣ್ ಬಿಜೆಪಿಗೆ ಸೇರಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ಮಂಗಳವಾರ ಮಹಾರಾಷ್ಟ್ರದ ನಂದೂರ್‌ಬಾರ್‌ ಜಿಲ್ಲೆ ಪ್ರವೇಶಿಸಿದೆ. ಇದರ ಬೆನ್ನಲ್ಲೇ ಪದ್ಮಾಕರ್ ವಾಲ್ವಿ ಕಾಂಗ್ರೆಸ್ ತೊರೆದಿರುವುದರಿಂದ ಪಕ್ಷಕ್ಕೆ ತುಸು ಹಿನ್ನಡೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.