ADVERTISEMENT

ಅನಾರೋಗ್ಯ: ಆಸ್ಪತ್ರೆಗೆ ದಾಖಲಾದ ಶಿವಸೇನಾ ಸಂಸದ ಸಂಜಯ್ ರಾವುತ್

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2019, 12:28 IST
Last Updated 11 ನವೆಂಬರ್ 2019, 12:28 IST
ಸಂಜಯ್ ರಾವುತ್
ಸಂಜಯ್ ರಾವುತ್   

ನವದೆಹಲಿ: ಎದೆನೋವಿನಿಂದ ಬಳಲುತ್ತಿದ್ದ ಶಿವಸೇನಾದ ರಾಜ್ಯಸಭಾ ಸಂಸದ ಸಂಜಯ್ ರಾವುತ್ ಬುಧವಾರ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಂದಿನಿಂದಲೂ ಸುದ್ದಿಯಲ್ಲಿದ್ದ ಸಂಜಯ್ ರಾವುತ್‌ಗೆ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.

ಕೆಲವು ದಿನಗಳಿಂದ ಎದೆ ನೋವು ಬರುತ್ತಿದ್ದಾಗಿ ಹೇಳಿದ್ದರು. ಇದರಿಂದಾಗಿ ತಪಾಸಣೆಗೆಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದೆರಡು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದು, ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಜಯ್ ರಾವುತ್ ಸೋದರ ಮತ್ತು ವಿಕ್ರೋಲಿ ಶಾಸಕ ಸುನಿಲ್ ರಾವುತ್ ತಿಳಿಸಿದ್ದಾರೆ.

ADVERTISEMENT

ಇದನ್ನೂ ಓದಿ...

105 ಸಂಖ್ಯಾಬಲದ ಬಿಜೆಪಿ ಸರ್ಕಾರ ರಚನೆಯಿಂದ ಹಿಂದೆ ಸರಿದ ಬಳಿಕ 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಎರಡನೇ ಅತಿ ದೊಡ್ಡ ಪಕ್ಷವಾದ ಶಿವಸೇನಾಗೆ ರಾಜ್ಯಪಾಲರು ಸರ್ಕಾರ ರಚಿಸಲು ಆಹ್ವಾನ ನೀಡಿದ್ದಾರೆ. ಸರ್ಕಾರ ರಚನೆಯ ಹಕ್ಕು ಮಂಡನೆಗೆ ಭಾನುವಾರ 24 ಗಂಟೆಯ ಕಾಲಾವಾಕಾಶ ನೀಡಿದ್ದು, ಇಂದು ಸಂಜೆ 7.30ಕ್ಕೆ ಕಾಲಾವಧಿ ಮುಗಿಯಲಿದೆ.

ಕಾಂಗ್ರೆಸ್‌ನ ಬಾಹ್ಯ ಬೆಂಬಲದೊಂದಿಗೆ ಶರದ್ ಪವಾರ್ ನೇತೃತ್ವದ ಎನ್‌ಸಿಪಿಯೊಂದಿಗೆಸರ್ಕಾರ ರಚಿಸಲು ಶಿವಸೇನಾ ಕಸರತ್ತು ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.