ADVERTISEMENT

ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕಿರುಕುಳ: ಶಿಕ್ಷಕ ಬಂಧನ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2024, 10:29 IST
Last Updated 21 ಆಗಸ್ಟ್ 2024, 10:29 IST
<div class="paragraphs"><p>ಸಾಂಕೇತಿಕ ಚಿತ್ರ&nbsp;</p></div>

ಸಾಂಕೇತಿಕ ಚಿತ್ರ 

   

ಅಕೋಲಾ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೊಗಳನ್ನು ತೋರಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು 47 ವರ್ಷದ ಪ್ರಮೋದ್ ಸರ್ದಾರ್ ಎಂದು ಗುರುತಿಸಲಾಗಿದೆ.

ADVERTISEMENT

ಆರೋಪಿ ಶಿಕ್ಷಕ ಕಳೆದ ನಾಲ್ಕು ತಿಂಗಳಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೊಗಳನ್ನು ತೋರಿಸಿ, ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆ ಸಂಬಂಧ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವೈಷ್ಣವಿ ತಿಳಿಸಿದ್ದಾರೆ.

ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿಗೆ ಕರೆ ಮಾಡಿ ತಮಗೆ ಆದ ಕಹಿ ಅನುಭವವನ್ನು ಹೇಳಿಕೊಂಡಿದ್ದಾರೆ. ಸಮಿತಿಯ ಸದಸ್ಯರು ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಮಾತನಾಡಿದ್ದಾರೆ. ಬಳಿಕ ಶಿಕ್ಷಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ.

ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.