ADVERTISEMENT

ಮುಖ್ಯಮಂತ್ರಿ ಸ್ಥಾನ ನೀಡುವುದಾದರೆ ಚರ್ಚೆಗೆ ಕರೆಯಿರಿ: ಉದ್ದವ್‌ ಠಾಕ್ರೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 10:41 IST
Last Updated 7 ನವೆಂಬರ್ 2019, 10:41 IST
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ   

ಮುಂಬೈ: ಮುಖ್ಯಮಂತ್ರಿ ಹುದ್ದೆಬಿಟ್ಟುಕೊಡುವುದಾದರೆ ಮಾತ್ರಚರ್ಚೆಗೆ ಕರೆಯಿರಿ ಎಂದು ಶಿವಸೇನಾ ಮುಖ್ಯಸ್ಥಉದ್ಧವ್ ಠಾಕ್ರೆ ಗುರುವಾರ ಹೇಳಿದ್ದಾರೆ.

ಮೈತ್ರಿಯನ್ನು ಮುರಿದುಕೊಳ್ಳಲು ಬಯಸುವುದಿಲ್ಲ. ಆದರೆ ಬಿಜೆಪಿಯು ಸಮಾನ ಅಧಿಕಾರ ಹಂಚಿಕೆ ಮಾಡಿಕೊಳ್ಳುವ ಕುರಿತು ಕೊಟ್ಟ ಮಾತುಗಳನ್ನು ಉಳಿಸಿಕೊಳ್ಳಲಿ ಎಂದುಉದ್ಧವ್ ಖಾರವಾಗಿ ಹೇಳಿದ್ದಾರೆ.

ಇಂದು ಪಕ್ಷದ ಶಾಸಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಮೈತ್ರಿಯನ್ನು ಮುರಿದುಕೊಳ್ಳಲು ನಾನು ಬಯಸುವುದಿಲ್ಲ, ಆದರೆ ಲೋಕಸಭಾ ಚುನಾವಣೆ ವೇಳೆಯಲ್ಲಿ ಬಿಜೆಪಿನೀಡಿದ್ದ ಮಾತುಗಳನ್ನು ಉಳಿಸಿಕೊಳ್ಳಲಿ ಎಂದಿದ್ದಾರೆ.

ADVERTISEMENT

ಲೋಕಸಭಾ ಚುನಾವಣೆ ವೇಳೆ ಅಧಿಕಾರ ಹಂಚಿಕೆ ಕುರಿತು ಆಗಿರುವ ನಿರ್ಧಾರದ ಬಗ್ಗೆಅವರು ಸಮ್ಮತಿ ಸೂಚಿಸುವುದಾದರೆಬಿಜೆಪಿಯ ಹಿರಿಯರೊಂದಿಗೆಚರ್ಚಿಸಲು ನಾನು ಸಿದ್ಧನಿದ್ದೇನೆ. 2.5 ವರ್ಷದ ಅವಧಿಗೆ ಮುಖ್ಯಮಂತ್ರಿ ಹುದ್ದೆಯನ್ನು ಶಿವಸೇನಾಗೆ ಬಿಟ್ಟುಕೊಡಲು ಅವರುನಿರ್ಧರಿಸಿದರೆ ನನ್ನನ್ನು ಮಾತುಕತೆಗೆ ಕರೆಯಲಿ,ಇಲ್ಲವಾದರೆ ಬೇಡ ಎಂದು ಉದ್ದವ್‌ ತಿಳಿಸಿದ್ದಾರೆ.

ನಮ್ಮ ಪಕ್ಷವು ಸ್ವಾಭಿಮಾನದಿಂದ ಹುಟ್ಟಿದೆ. ನಾವು ಬಿಜೆಪಿಯನ್ನು ಮೂಲೆಗುಂಪು ಮಾಡಲು ಬಯಸುವುದಿಲ್ಲ. ಮುಖ್ಯಮಂತ್ರಿ ನೀಡಿರುವ ಹೇಳಿಕೆಸಂಪೂರ್ಣ ಅಸಂಬದ್ಧವಾಗಿದೆ. ಬಿಜೆಪಿಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದರೆ ಮತ್ತೆ ಚರ್ಚಿಸಿಏನು ಪ್ರಯೋಜನ ಎಂದು ಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ.

ಈಗಿನ ಪರಿಸ್ಥಿತಿಯಲ್ಲಿ ಶಿವಸೇನಾದ ಮುಖ್ಯಸ್ಥರು ಏನೇ ನಿರ್ಧಾರ ಕೈಗೊಂಡರು ಅದಕ್ಕೆ ನಮ್ಮ ಸಮ್ಮತಿ ಇದೆ. ಹಾಗೇ ಅವರು ಏನೇ ನಿರ್ಧಾರಕೈಗೊಂಡರು ಅದನ್ನು ನಾವು ಬೆಂಬಲಿಸುತ್ತೇವೆ ಎನ್ನುತ್ತಾರೆ ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಅಬ್ದುಲ್ ಸತ್ತರ್.

ಮತ್ತೋರ್ವ ಶಾಸಕ ಉದಯ್ ಸಮಂತ್ ಮಾತನಾಡಿ, ಸರ್ಕಾರ ರಚನೆ ವಿಚಾರದಲ್ಲಿ ಪಕ್ಷದ ಮುಖ್ಯಸ್ಥರಿಗೆ ಅಂತಿಮ ನಿರ್ಧಾರ ಕೈಗೊಳ್ಳಲು ಸಂಪೂರ್ಣ ಬೆಂಬಲ ನೀಡಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.