ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶುಕ್ರವಾರ ಇಲ್ಲಿನ ಎಚ್.ಎನ್.ರಿಲೈಯನ್ಸ್ ಆಸ್ಪತ್ರೆಯಲ್ಲಿ ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾದರು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ.
‘61 ವರ್ಷದ ಠಾಕ್ರೆ ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.ಶಸ್ತ್ರಚಿಕಿತ್ಸೆಯ ನಂತರ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ’ ಎಂದು ವೈದ್ಯರಾದ ಹೃದ್ರೋಗತಜ್ಞ ಅಜಿತ್ ದೇಸಾಯಿ ಮತ್ತು ಬೆನ್ನೂಮೂಳೆ ಶಸ್ತ್ರಚಿಕಿತ್ಸಕ ಶೇಖರ್ ಭೋಜರಾಜ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
ಕುತ್ತಿಗೆ ನೋವು ಉಲ್ಬಣಗೊಂಡ ನಂತರ ಠಾಕ್ರೆ ಅವರು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.