ADVERTISEMENT

ಆಲಮಟ್ಟಿ ಎತ್ತರ ಹೆಚ್ಚಳ:ಕರ್ನಾಟಕವನ್ನು ತಡೆಯಿರಿ; ಕೇಂದ್ರಕ್ಕೆ ಮಹಾರಾಷ್ಟ್ರ ಪತ್ರ

ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಮಹಾರಾಷ್ಟ್ರ ಸರ್ಕಾರ

ಪಿಟಿಐ
Published 4 ಆಗಸ್ಟ್ 2025, 23:40 IST
Last Updated 4 ಆಗಸ್ಟ್ 2025, 23:40 IST
ನವದೆಹಲಿಯ ಜಲಶಕ್ತಿ ಸಚಿವಾಲಯದಲ್ಲಿ ಸೋಮವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌. ಪಾಟೀಲ್‌ ಅವರ ಜೊತೆ ರಾಜ್ಯ ನಿಯೋಗದ ಭೇಟಿಯಾಗಿ ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ–ಪಾಟೀಲ ಮನವಿ ಸಲ್ಲಿಸಿದರು–ಎಕ್ಸ್‌ ಚಿತ್ರ
ನವದೆಹಲಿಯ ಜಲಶಕ್ತಿ ಸಚಿವಾಲಯದಲ್ಲಿ ಸೋಮವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌. ಪಾಟೀಲ್‌ ಅವರ ಜೊತೆ ರಾಜ್ಯ ನಿಯೋಗದ ಭೇಟಿಯಾಗಿ ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ–ಪಾಟೀಲ ಮನವಿ ಸಲ್ಲಿಸಿದರು–ಎಕ್ಸ್‌ ಚಿತ್ರ   

ನವದೆಹಲಿ: ಕೃಷ್ಣಾ ನದಿಗೆ ನಿರ್ಮಿಸಿರುವ ಆಲಮಟ್ಟಿ ಅಣೆಕಟ್ಟು ಎತ್ತರವನ್ನು ಹೆಚ್ಚಿಸುವ ಕರ್ನಾಟಕದ ನಿರ್ಧಾರವನ್ನು ತಡೆಯಬೇಕು ಎಂದು ಕೋರಿ ಮಹಾರಾಷ್ಟ್ರ ಸರ್ಕಾರವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಅಣೆಕಟ್ಟೆಯ ಎತ್ತರ ಹೆಚ್ಚಳವಾದರೆ ಹಿನ್ನೀರಿನಿಂದ ಸಾಂಗ್ಲಿ, ಸತಾರಾ, ಕೊಲ್ಹಾಪುರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ನವದೆಹಲಿಯ ಜಲಶಕ್ತಿ ಸಚಿವಾಲಯದಲ್ಲಿ ಸೋಮವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌. ಪಾಟೀಲ್‌ ಅವರನ್ನು ನಿಯೋಗದೊಂದಿಗೆ ಭೇಟಿಯಾಗಿ ಮನವಿ ಸಲ್ಲಿಸಿದ ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ–ಪಾಟೀಲ, ‘ಕರ್ನಾಟಕ  ಸರ್ಕಾರವು ಅಣೆಕಟ್ಟಿನ ಎತ್ತರವನ್ನು 519.60 ಮೀಟರ್‌ನಿಂದ 524.256 ಮೀಟರ್‌ಗೆ ಏರಿಸಲು ಪ್ರಸ್ತಾಪಿಸಿದೆ. ಇದರಿಂದ ಕೃಷ್ಣಾ ಜಲಾನಯದ ಪ್ರದೇಶದಲ್ಲಿರುವ ಸಾಂಗ್ಲಿ, ಸತಾರಾ, ಕೊಲ್ಹಾಪುರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಲಿದ್ದು, ಗಂಭೀರ ಪರಿಣಾಮ ಎದುರಾಗಲಿದೆ. ಪರಿಸರ ಹಾಗೂ ಮನುಷ್ಯರ ಮೇಲಾಗುವ ಹಾನಿಯನ್ನು ಪರಿಗಣಿಸಿ, ನಮ್ಮ ರಾಜ್ಯವು ನಿರಂತರವಾಗಿ ಆಕ್ಷೇಪಣೆ ವ್ಯಕ್ತಪಡಿಸಿದೆ. ಇದಕ್ಕೆ ಸಂಬಂಧಿಸಿ, ಅಂಕಿಅಂಶಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ. ಹೀಗಾಗಿ, ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಿ, ಅಣೆಕಟ್ಟೆ ಹೆಚ್ಚಳ ಪ್ರಸ್ತಾಪವನ್ನು ರದ್ದುಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ಮಹಾರಾಷ್ಟ್ರದ ಸಂಸತ್‌ ಸದಸ್ಯರು, ಸಚಿವರು ಹಾಗೂ ವಿಧಾನಸಭಾ ಸದಸ್ಯರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.