ಪುಣೆ: ಕರ್ನಾಟಕ ಸರ್ಕಾರವು ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಳ ಮಾಡಲು ಮುಂದಾದಲ್ಲಿ ಅದನ್ನು ಪ್ರಶ್ನಿಸಿ ರಾಜ್ಯವು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಬುಧವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಣೆಕಟ್ಟೆ ಎತ್ತರ ಹೆಚ್ಚಿಸುವ ಕರ್ನಾಟಕದ ಈ ಪ್ರಸ್ತಾವವನ್ನು ಮಹಾರಾಷ್ಟ್ರ ಹಿಂದಿನಿಂದಲೂ ವಿರೋಧಿಸುತ್ತಾ ಬಂದಿದೆ. ಈಗ ತನ್ನ ಯೋಜನೆ ಕಾರ್ಯಗತಗೊಳಿಸಲು ಕರ್ನಾಟಕ ಮುಂದಾದಲ್ಲಿ, ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು’ ಎಂದರು.
ಅಣೆಕಟ್ಟೆ ಎತ್ತರ ಹೆಚ್ಚಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಕಂಡುಬರಲಿದೆ ಎಂಬ ಕಾರಣ ಒಡ್ಡಿ ಮಹಾರಾಷ್ಟ್ರ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.