ADVERTISEMENT

ಮಹಾರಾಷ್ಟ್ರ: ಐವರು ನಕ್ಸಲರ ಹತ್ಯೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 20:01 IST
Last Updated 18 ಅಕ್ಟೋಬರ್ 2020, 20:01 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನಾಗಪುರ: ಮಹಾರಾಷ್ಟ್ರದ ಗಡಚಿರೋಲಿ ಜಿಲ್ಲೆಯಲ್ಲಿ, ಕೊಸ್ಮಿ–ಕಿಸ್ನೇಲಿ ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐವರು ನಕ್ಸಲರು ಮೃತಪಟ್ಟಿದ್ದಾರೆ.

ಸಿ–60 ಕಮಾಂಡೊಗಳು ಆ ಭಾಗದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದರು. ಪೊಲೀಸರು ಪ್ರತಿರೋಧ ತೋರಿದ್ದು, ಬಳಿಕ ನಕ್ಸಲರು ಓಡಿಹೋದರು. ತಪಾಸಣೆಯ ವೇಳೆ ಐವರು ನಕ್ಸಲರ ಶವ ಪತ್ತೆಯಾಗಿದೆ. ಅವರ ಗುರುತು ಪತ್ತೆ ಹಚ್ಚಬೇಕಾಗಿದೆ. ಸ್ಥಳದಿಂದ ರೈಫಲ್ ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಅಂಕಿತ್ ಗೋಯಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT