ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಸಾಜೋಗ್ ಗ್ರಾಮದ ಸರಪಂಚ್ ಆಗಿದ್ದ ಸಂತೋಷ್ ದೇಶಮುಖ್ ಅವರ ಹತ್ಯೆಯನ್ನು ಪಕ್ಷಾತೀತವಾಗಿ ಖಂಡಿಸಿರುವ ನಾಯಕರು ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಮರಾಠ ಸಮುದಾಯದ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರಾದ ಯುವರಾಜ್ ಸಾಂಭಾಜಿ ರಾಜೆ ಛತ್ರಪತಿ ಅವರು ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಸಚಿವ ಧನಂಜಯ್ ಮುಂಡೆ ಅವರ ಆಪ್ತ ಸಹಾಯಕ ವಾಲ್ಮಿಕ್ ಕರಾಡ್, ಈ ಹತ್ಯೆಯ ಪ್ರಮುಖ ಸೂತ್ರಧಾರಿ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
ಈ ತಿಂಗಳ ಆರಂಭದಲ್ಲಿ ಸಂತೋಷ್ ಅವರನ್ನು ಅಪಹರಿಸಿ, ಹಿಂಸಿಸಿ ಹತ್ಯೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.