ಯತಿ ನರಸಿಂಹಾನಂದ ಮಹಾರಾಜ್
–ಪಿಟಿಐ ಚಿತ್ರ
ಗಾಜಿಯಾಬಾದ್ (ಉತ್ತರ ಪ್ರದೇಶ): ವಿವಾದಾತ್ಮಕ ಹೇಳಿಕೆಗಳಿಗೆ ಖ್ಯಾತರಾಗಿರುವ ಯತಿ ನರಸಿಂಗಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ.
ದ್ವೇಷ ಹರಡುವಿಕೆ ಮತ್ತು ಪೊಲೀಸ್ ಅಧಿಕಾರಿಗಳನ್ನು ವಿಡಿಯೊದಲ್ಲಿ ನಿಂದಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಧಾರ್ಮಿಕ ಭಾವನೆಗಳನ್ನು ಪ್ರಚೋದಿಸಿದ್ದಾರೆ. ಕ್ರಿಮಿನಲ್ ಬೆದರಿಕೆಗೆ ಕಾರಣವಾಗುವಂತಹ ಹಾಗೂ ಅಪಮಾನಕಾರಿ, ಮಾನಹಾನಕಾರಿ ಮತ್ತು ಸಾರ್ವಜನಿಕ ಶಾಂತಿಯನ್ನು ಭಂಗಗೊಳಿಸುವ ಉದ್ದೇಶದಿಂದಲೇ ಕೆಲವೊಂದು ಪದ ಬಳಸಿದ್ದಾರೆ. ಮಹಾತ್ಮಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಗಾಜಿಯಾಬಾದ್‌ನ ಪೊಲೀಸ್ ಕಮಿಷನರ್, ಲೋನಿಯ ಸಹಾಯಕ ಪೊಲೀಸ್ ಕಮಿಷನರ್ ವಿರುದ್ಧ ವಿಡಿಯೊದಲ್ಲಿ ನರಸಿಂಗಾನಂದ ಗಿರಿ ಅವರು ನಿಂದನಾತ್ಮಕ ಭಾಷೆ ಬಳಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ವೇವ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಾಗಿದ್ದು, ಈ ಕುರಿತಂತೆ ತನಿಖೆ ನಡೆದಿದೆ ಎಂದು ಡಿಸಿಪಿ (ಗ್ರಾಮೀಣ) ಸುರೇಂದ್ರನಾಥ್ ತಿವಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.