ADVERTISEMENT

ಸತ್ಯ ಇರುವಲ್ಲಿ ಬಾಪು ಜೀವಂತವಾಗಿದ್ದಾರೆ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ

​ಪ್ರಜಾವಾಣಿ ವಾರ್ತೆ
Published 30 ಜನವರಿ 2022, 5:29 IST
Last Updated 30 ಜನವರಿ 2022, 5:29 IST
ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ನಮಿಸುತ್ತಿರುವ ರಾಹುಲ್‌ ಗಾಂಧಿ
ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ನಮಿಸುತ್ತಿರುವ ರಾಹುಲ್‌ ಗಾಂಧಿ   

ನವದೆಹಲಿ: ಇಂದು ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಭಾರತದ ಸ್ವಾತಂತ್ರ್ಯಕ್ಕೊಸ್ಕರ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರ ಸ್ಮರಣೆಗಾಗಿ ದೇಶದಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಹಿಂದುಗಳು ಮತ್ತು ಹಿಂದುತ್ವವಾದಿಗಳು’ ಎಂಬ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದ್ದಾರೆ.

‘ಒಬ್ಬ ಹಿಂದುತ್ವವಾದಿ ಗಾಂಧೀಜಿಗೆ ಗುಂಡು ಹಾರಿಸಿ ಕೊಂದನು. ಎಲ್ಲಾ ಹಿಂದುತ್ವವಾದಿಗಳು ಗಾಂಧೀಜಿ ಇನ್ನಿಲ್ಲ ಎಂಬುದಾಗಿ ಭಾವಿಸುತ್ತಾರೆ. ಸತ್ಯ ಇರುವಲ್ಲಿ ಬಾಪು ಇಂದಿಗೂ ಜೀವಂತವಾಗಿದ್ದಾರೆ’ ಎಂದು ರಾಹುಲ್‌ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ADVERTISEMENT

ರಾಹುಲ್‌ ಗಾಂಧಿ ಅವರು ಭಾನುವಾರ ಬೆಳಿಗ್ಗೆ ಮಹಾತ್ಮ ಗಾಂಧೀಜಿಯವರ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.