ADVERTISEMENT

ರೈತ ಹೋರಾಟಕ್ಕೆ ಗಾಂಧಿ ಮೊಮ್ಮಗಳು ತಾರಾ ಗಾಂಧಿ ಬೆಂಬಲ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 4:41 IST
Last Updated 14 ಫೆಬ್ರುವರಿ 2021, 4:41 IST
ತಾರಾ ಗಾಂಧಿ
ತಾರಾ ಗಾಂಧಿ   

ಗಾಜಿಯಾಬಾದ್: ಮಹಾತ್ಮ ಗಾಂಧಿ ಮೊಮ್ಮಗಳು ತಾರಾ ಗಾಂಧಿ ಭಟ್ಟಾಚಾರ್ಜಿ ಅವರು ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ದೆಹಲಿ-ಉತ್ತರ ಪ್ರದೇಶ ಗಡಿಭಾಗದ ಗಾಜಿಪುರಕ್ಕೆ ಶನಿವಾರ ಭೇಟಿ ನೀಡಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದರು.

ನಾನು ಯಾವುದೇ ರಾಜಕೀಯ ಕಾರ್ಯಕ್ರಮದ ಭಾಗವಾಗಿ ಇಲ್ಲಿಗೆ ಬಂದಿಲ್ಲ, ರೈತರ ಹೋರಾಟವನ್ನು ಬೆಂಬಲಿಸಲು ಇಲ್ಲಿಗೆ ಬಂದಿರುವೆ. ಸರ್ಕಾರ ಕೂಡಲೇ ರೈತ ಸಮುದಾಯಕ್ಕೆ ಸಕರಾತ್ಮಕವಾಗಿ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಇದೇ ವೇಳೆ ರೈತ ಮುಖಂಡರ ಜತೆ ತಾರಾ ಗಾಂಧಿ ಚರ್ಚೆ ನಡೆಸಿದರು. ಪ್ರತಿಭಟನಾನಿರತ ರೈತರಿಗೆ ಮಾನಸಿಕ ಸ್ಥೈರ್ಯ ತುಂಬಿದ್ದಾರೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ರಾಮಚಂದ್ರ ರಾಹಿ, ಅಖಿಲ ಭಾರತ ಸರ್ವ ಸೇವಾ ಸಂಘದ ವ್ಯವಸ್ಥಾಪಕ ಟ್ರಸ್ಟಿ ಅಶೋಕ್ ಶರಣ್, ಗಾಂಧಿ ಸ್ಮಾರಕ ನಿಧಿ ನಿರ್ದೇಶಕ ಸಂಜಯ್ ಸಿಂಘಾ, ನ್ಯಾಷನಲ್ ಗಾಂಧಿ ಮ್ಯೂಸಿಯಂ ನಿರ್ದೇಶಕ ಎ.ಅಣ್ಣಾಮಲೈ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.