ಮಹಾರಾಷ್ಟ್ರದ ಬಿಜೆಪಿ ನಾಯಕ ಹಾಗೂ ಸಂಭಾವ್ಯ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ನಿನ್ನೆ ತಡರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.
ಬೆಂಗಳೂರು: ಮಹಾರಾಷ್ಟ್ರದ ಬಿಜೆಪಿ ನಾಯಕ ಹಾಗೂ ಸಂಭಾವ್ಯ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ನಿನ್ನೆ ತಡರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.
ಮಹಾರಾಷ್ಟ್ರ ಚುನಾವಣೆಯ ಭರ್ಜರಿ ಯಶಸ್ಸಿನ ಹಿನ್ನೆಲೆಯಲ್ಲಿ ದೇವೇಂದ್ರ ಫಡಣವೀಸ್ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.
ಈ ವೇಳೆ ಮಹಾರಾಷ್ಟ್ರದ ಉಸ್ತುವಾರಿ ಮುಖ್ಯಮಂತ್ರಿ ಏಕನಾಥ್ ಶಿಂದೆ, ಎನ್‌ಸಿಪಿ ನಾಯಕ ಅಜಿತ್ ಪವಾರ್, ಪ್ರಪುಲ್ಲ ಪಟೇಲ್, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಹಾಜರಿದ್ದರು. ತಡರಾತ್ರಿವರೆಗೆ ಸಭೆ ನಡೆದಿದೆ. ಈ ಕುರಿತು ಎಎನ್‌ಐ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಇಂದು ಮುಂಬೈನಲ್ಲಿ ಮಹಾಯುತಿ ಕೂಟದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಕೂಟದ ಈ ಎಲ್ಲ ನಾಯಕರು ಭಾಗವಹಿಸಲಿದ್ದಾರೆ. ಈಗಾಗಲೇ ದೇವೇಂದ್ರ ಫಡಣವೀಸ್ ಅವರೇ ಮಹಾ ಸಿಎಂ ಆಗಲಿದ್ದಾರೆ ಎಂಬುದು ಬಹುತೇಕ ಅಂತಿಮವಾಗಿದೆ. ಈ ನಿರ್ಧಾರಕ್ಕೆ ಏಕನಾಥ್ ಶಿಂದೆ ಹಾಗೂ ಅಜಿತ್ ಪವಾರ್ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಇಂದು ನಡೆಯುವ ಸಭೆಯಲ್ಲಿ ನೂತನ ಸರ್ಕಾರದಲ್ಲಿ ಡಿಸಿಎಂ ಯಾರಾಗಬೇಕು, ಯಾವ ಖಾತೆಗಳನ್ನು ಯಾರಿಗೆ ಕೊಡಬೇಕು ಎಂಬುದರ ಬಗ್ಗೆ ಅಮಿತ್ ಶಾ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಧಾನಿ ಮೋದಿ ಒಪ್ಪಿಗೆ ನಂತರ ಮಹಾರಾಷ್ಟ್ರ ಬಿಜೆಪಿ ದೇವೇಂದ್ರ ಫಡಣವೀಸ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಘೋಷಣೆ ಮಾಡಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.