ADVERTISEMENT

ಸಂಭಲ್‌ಪುರ ಬಳಿ ಹಳಿ ತಪ್ಪಿದ ಮಹಿಮಾ ಗೋಸೈನ್ ಎಕ್ಸ್‌ಪ್ರೆಸ್‌

ಪಿಟಿಐ
Published 24 ಜುಲೈ 2025, 6:58 IST
Last Updated 24 ಜುಲೈ 2025, 6:58 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಭುವನೇಶ್ವರ: ಶಾಲಿಮಾರ್- ಸಂಭಲ್‌ಪುರ ಮಹಿಮಾ ಗೋಸೈನ್ ಎಕ್ಸ್‌ಪ್ರೆಸ್ ರೈಲು ಇಂದು (ಗುರುವಾರ) ಸಂಭಲ್‌ಪುರ ರೈಲು ನಿಲ್ದಾಣದ ಬಳಿ ಹಳಿ ತಪ್ಪಿದೆ.

ಬೆಳಿಗ್ಗೆ 9:18ಕ್ಕೆ ಈ ಘಟನೆ ನಡೆದಿದೆ. ಅವಘಡದಲ್ಲಿ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ಪೂರ್ವ ಕರಾವಳಿ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ರೈಲು ನಿಧಾನವಾಗಿ ಚಲಿಸುತ್ತಿದ್ದುದರಿಂದ ದೊಡ್ಡ ದುರಂತ ತಪ್ಪಿದೆ ಎಂದು ರೈಲಿನ ಸಿಬ್ಬಂದಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.