ADVERTISEMENT

ಬುಲ್ಡೋಜರ್‌ ಆಡಳಿತದ ವಿರುದ್ಧ ಸುಪ್ರೀಂ ಸ್ವಯಂಪ್ರೇರಿತ ದೂರು ದಾಖಲಿಸಲಿ: ಮಹುವಾ

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 14:23 IST
Last Updated 14 ಜೂನ್ 2022, 14:23 IST
ಮಹುವಾ ಮೊಯಿತ್ರಾ
ಮಹುವಾ ಮೊಯಿತ್ರಾ   

ಬೆಂಗಳೂರು: ಬುಲ್ಡೋಜರ್‌ ಬಳಸಿ ಮನೆಗಳನ್ನು ನೆಲಸಮ ಮಾಡುವ ಘಟನೆಗಳ ಬಗೆಗೆ ಸ್ವಯಂಪ್ರೇರಿತವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

'ಗೌರವಾನ್ವಿತ ಸುಪ್ರೀಂ ಕೋರ್ಟ್‌ ಬುಲ್ಡೋಜರ್‌ ಆಡಳಿತದ ಕಾರ್ಯಾಚರಣೆ ವಿರುದ್ಧ ದಯವಿಟ್ಟು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬಹುದೇ? ಈಗ ಅಲ್ಲದಿದ್ದರೆ ಮತ್ತಿನ್ಯಾವಾಗ?' ಎಂದು ಮಹುವಾ ಅವರು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಪ್ರವಾದಿ ಮಹಮ್ಮದರ ವಿರುದ್ಧ ಅವಹೇಳನ ಮಾಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್‌ ಜಿಂದಾಲ್‌ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ಮನೆಗಳನ್ನು ಬುಲ್ಡೋಜರ್‌ ಬಳಸಿ ನೆಲಸಮ ಮಾಡಲಾಗುತ್ತಿರುವ ಕ್ರಮಕ್ಕೆ ದೇಶದಾದ್ಯಂತ ತೀವ್ರ ಪ್ರತಿರೋಧ ವ್ಯಕ್ತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.