ADVERTISEMENT

Nagpur Violence | ಮಹಿಳಾ ಕಾನ್‌ಸ್ಟೆಬಲ್‌ಗೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಏಜೆನ್ಸೀಸ್
Published 19 ಮಾರ್ಚ್ 2025, 11:33 IST
Last Updated 19 ಮಾರ್ಚ್ 2025, 11:33 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಮುಂಬೈ: ಮಹಿಳಾ ಕಾನ್‌ಸ್ಟೆಬಲ್‌ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಸ್ಥಳೀಯ ರಾಜಕೀಯ ಮುಖಂಡ ಫಾಹೀಮ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಜತೆಗೆ, ಈತನೇ ನಾಗ್ಪುರ ಹಿಂಸಾಚಾರದ ಮಾಸ್ಟರ್ ಮೈಂಡ್ ಎಂದು ಗುರುತಿಸಲಾಗಿದೆ.

ADVERTISEMENT

ನಾಗ್ಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಐದು ಎಫ್‌ಐಆರ್‌ ದಾಖಲಿಸಲಾಗಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ನಗರದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ ಎಂದು ನಾಗ್ಪುರ ಪೊಲೀಸ್‌ ಆಯುಕ್ತ ರವೀಂದ್ರ ಕುಮಾರ್‌ ಸಿಂಗಾಲ್‌ ಮಾಹಿತಿ ನೀಡಿದ್ದಾರೆ.

ಗಣೇಶಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಫಾಹೀಮ್ ಖಾನ್ ಹೆಸರು ಅಧಿಕೃತವಾಗಿ ಸೇರ್ಪಡೆಯಾದ ಕೆಲವೇ ಗಂಟೆಗಳಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಹಿಂಸಾಚಾರದ ವೇಳೆ ಗಲಭೆಕೋರರು ಮಹಿಳಾ ಕಾನ್‌ಸ್ಟೆಬಲ್ ಅವರನ್ನು ಅನುಚಿತವಾಗಿ ಮುಟ್ಟಿ, ವಿವಸ್ತ್ರಗೊಳಿಸಲು ಪ್ರಯತ್ನಿಸಿದ್ದರು. ಜತೆಗೆ, ಮಹಿಳಾ ಕಾನ್‌ಸ್ಟೆಬಲ್ ಅವರತ್ತ ಅಶ್ಲೀಲ ಸನ್ನೆ ತೋರಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ‌

ಘಟನೆ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಇದುವರೆಗೆ 51 ಗಲಭೆಕೋರರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಫಾಹೀಮ್ ಖಾನ್‌ ಅಲ್ಪಸಂಖ್ಯಾತರ ಪ್ರಜಾಸತ್ತಾತ್ಮಕ ಪಕ್ಷದ (ಎಂಡಿಪಿ) ನಾಗ್ಪುರ ಜಿಲ್ಲಾ ಅಧ್ಯಕ್ಷರಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಫಾಹೀಮ್ ಖಾನ್‌ ಅವರು ಬಿಜೆಪಿಯ ನಿತಿನ್ ಗಡ್ಕರಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.