ಲಖನೌ: ವಿರೋಧ ಪಕ್ಷಗಳು ಭಗವಾನ್ ರಾಮನ ವಿರುದ್ಧವಾಗಿವೆ ಎಂದು ಶನಿವಾರ ಆರೋಪಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ‘ಇಂತಹ ರಾಮ ದ್ರೋಹಿಗಳು ಕೇವಲ ನಂಬಿಕೆಗಷ್ಟೇ ಘಾಸಿಯುಂಟುಮಾಡುತ್ತಿಲ್ಲ, ಬದಲಾಗಿ ಸಾಮಾಜಿಕ ಸಂರಚನೆಗೆ ಧಕ್ಕೆಯುಂಟು ಮಾಡುವುದರ ಜೊತೆಗೆ ಅಭಿವೃದ್ಧಿಗೂ ಅಡ್ಡಿಪಡಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.
ಇವರ ಆಳ್ವಿಕೆಯಲ್ಲಿ ರಾಜ್ಯವನ್ನು ದಂಗೆಯ ಬೆಂಕಿಗೆ ಎಸೆದಿದ್ದರು ಎಂದೂ ಕಿಡಿ ಕಾರಿದ್ದಾರೆ.
ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಆಯೋಜಿಸಿದ್ದ ವಿಶ್ವಕರ್ಮ ಸಮುದಾಯದವರ ಸಭೆಯಲ್ಲಿ ಮಾತನಾಡಿದ ಅವರು, ‘ರಾಮನ ಹಿತೈಷಿಗಳಾಗದವರು ಎಂದಿಗೂ ನಿಮ್ಮ ಹಿತೈಷಿಗಳಾಗಲು ಸಾಧ್ಯವಿಲ್ಲ’ ಎಂದೂ ಹೇಳಿದ್ದಾರೆ.
‘ಭಯೋತ್ಪಾದಕರನ್ನು ರಕ್ಷಿಸುವ, ಗಲಭೆಕೋರರನ್ನು ಅಪ್ಪಿಕೊಳ್ಳುವ ರಾಮ ದ್ರೋಹಿಗಳಿಂದ ಅಂತರ ಕಾಯ್ದುಕೊಳ್ಳುವುದು ಈಗಿನ ಹಾಗೂ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕೆ ಅತ್ಯಗತ್ಯ’ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.