ADVERTISEMENT

ಮುಂಬೈ: ಇ.ಡಿ ಕಚೇರಿ ಕಟ್ಟಡದಲ್ಲಿ ಬೆಂಕಿ ಅವಘಡ

ಪಿಟಿಐ
Published 27 ಏಪ್ರಿಲ್ 2025, 2:31 IST
Last Updated 27 ಏಪ್ರಿಲ್ 2025, 2:31 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮುಂಬೈ: ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಜಾರಿ ನಿರ್ದೇಶನಾಲಯ (ಇ.ಡಿ) ಕಚೇರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ADVERTISEMENT

ನಗರದ ಕರಿಂಬೋಯ್ ರಸ್ತೆಯ ಗ್ರ್ಯಾಂಡ್ ಹೋಟೆಲ್ ಬಳಿ ಇರುವ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯನ್ನು ಹೊಂದಿರುವ ಬಹುಮಹಡಿ ಕೈಸರ್-ಐ-ಹಿಂದ್ ಕಟ್ಟಡದಲ್ಲಿ ತಡರಾತ್ರಿ 2:31ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಕ್ಷಣ ಅಗ್ನಿಶಾಮಕ ತಂಡಕ್ಕೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಐದು ಅಂತಸ್ತಿನ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.