ADVERTISEMENT

ವಿಶಾಖಪಟ್ಟಣದ ಎಚ್‌ಪಿಸಿಎಲ್ ಘಟಕದಲ್ಲಿ ಭಾರೀ ಅಗ್ನಿ ಅವಘಡ

ಪಿಟಿಐ
Published 25 ಮೇ 2021, 17:59 IST
Last Updated 25 ಮೇ 2021, 17:59 IST
   

ವಿಶಾಖಪಟ್ಟಣ: ಇಲ್ಲಿನ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಸ್ಥಾವರದಲ್ಲಿ ಮಂಗಳವಾರ ಮಧ್ಯಾಹ್ನ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಸಾವು–ನೋವು ಸಂಭವಿಸಿಲ್ಲ.

‘ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅದನ್ನು ನಂದಿಸಲಾಗಿದೆ. ಇಲ್ಲಿ ಕೆಲಸ ಮಾಡುವ ಎಲ್ಲರೂ ಸುರಕ್ಷಿತವಾಗಿದ್ದಾರೆ. ಯಾವುದೇಪ್ರಾಣಹಾನಿ ಸಂಭವಿಸಿಲ್ಲ’ ಎಂದು ಜಿಲ್ಲಾಧಿಕಾರಿ ವಿ.ವಿನಯ್‌ ಚಂದ್‌ ಹೇಳಿದರು.

ಎಚ್‌ಪಿಸಿಎಲ್ ಹಳೆಯ ಟರ್ಮಿನಲ್‌ನಲ್ಲಿರುವ ಕಚ್ಚಾ ತೈಲ ಶುದ್ಧೀಕರಣ ಘಟಕ -3 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಆವರಿಸಿತ್ತು ಎಂದು ಮೂಲಗಳು ತಿಳಿಸಿವೆ. ಎಚ್‌ಪಿಸಿಎಲ್‌ ತಂಡಗಳು, ನೌಕಾದಳದ ಪೂರ್ವ ಕಮಾಂಡ್ ಮತ್ತು ಆಂಧ್ರಪ್ರದೇಶದ ವಿಪತ್ತು ನಿರ್ವಹಣೆ ಹಾಗೂ ಅಗ್ನಿಶಾಮಕ ಸೇವೆಗಳ ವಿಭಾಗದ ಸಿಬ್ಬಂದಿ ತಕ್ಷಣವೇ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ADVERTISEMENT

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.