ADVERTISEMENT

ದೆಹಲಿ: ಶೂ ಕಾರ್ಖಾನೆಯಲ್ಲಿ ಬೆಂಕಿ; ಆರು ಮಂದಿ ಸಿಲುಕಿರುವ ಶಂಕೆ

ಪಿಟಿಐ
Published 21 ಜೂನ್ 2021, 7:45 IST
Last Updated 21 ಜೂನ್ 2021, 7:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ಪಶ್ಚಿಮ ದೆಹಲಿಯ ಉದ್ಯೋಗ್‌ ನಗರದ ಶೂ ಕಾರ್ಖಾನೆಯೊಂದರಲ್ಲಿ ಸೋಮವಾರ ಬೆಂಕಿ ಅನಾಹುತ ಸಂಭವಿಸಿದ್ದು, ಕಾರ್ಖಾನೆಯೊಳಗೆ ಐದರಿಂದ ಆರು ಮಂದಿ ಸಿಲುಕಿರುವ ಸಾಧ್ಯತೆಗಳಿವೆ’ ಎಂದು ಪೊಲೀಸರು ಶಂಕಿಸಿದ್ದಾರೆ.

‘ಈ ಬಗ್ಗೆ ನಮಗೆ ಬೆಳಿಗ್ಗೆ 8.56ಕ್ಕೆ ಮಾಹಿತಿ ಸಿಕ್ಕಿದೆ. ತಕ್ಷಣವೇ 15 ವಾಹನಗಳೊಂದಿಗೆ 24 ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು’ ಎಂದು ಡಿಸಿಪಿ ಪರ್ವಿಂದರ್ ಸಿಂಗ್ ಮಾಹಿತಿ ನೀಡಿದರು.

‘ಕಾರ್ಖಾನೆಯೊಳಗೆ ಐದರಿಂದ ಆರು ಮಂದಿ ಸಿಲುಕಿರುವ ಸಾಧ್ಯತೆಗಳಿವೆ. ಈವರೆಗೆ ಯಾವುದೇ ಸಾವು–ನೋವು ವರದಿಯಾಗಿಲ್ಲ. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ’ ಎಂದು ಪೊಲೀಸರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.