ADVERTISEMENT

Delhi polls | ಹೆಚ್ಚಿನ ಅಭ್ಯರ್ಥಿಗಳು 41–50 ವಯಸ್ಸಿನವರು: ಎಡಿಆರ್‌

ಪಿಟಿಐ
Published 27 ಜನವರಿ 2025, 12:18 IST
Last Updated 27 ಜನವರಿ 2025, 12:18 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಹುತೇಕ ಅಭ್ಯರ್ಥಿಗಳು 41–50 ವಯಸ್ಸಿನವರು ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಎಡಿಆರ್‌ ಹೇಳಿದೆ.

ಫೆಬ್ರುವರಿ 5ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ವಯಸ್ಸು ಹಾಗೂ ಶೈಕ್ಷಣಿಕ ಅರ್ಹತೆಗಳ ಕುರಿತು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ತನ್ನ ವರದಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ನಾಮಪತ್ರದಲ್ಲಿ ಸಲ್ಲಿಸಿದ ಅಫಿಡವಿಟ್‌ ಆ ಆಧರಿಸಿ ಈ ವರದಿ ಮಾಡಲಾಗಿದೆ.

ADVERTISEMENT

2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 672 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ವರದಿಯ ಪ್ರಕಾರ 2020ರಲ್ಲಿ 41-50 ವಯಸ್ಸಿನ 199 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 2025ರಲ್ಲಿ ಅವರ ಸಂಖ್ಯೆ 235ಕ್ಕೆ ಏರಿಕೆಯಾಗಿದೆ.

70 ವರ್ಷಕ್ಕಿಂತ ಮೇಲ್ಪಟ್ಟ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. 2020ರಲ್ಲಿ 11 ಮಂದಿ ಸ್ಪರ್ಧಿಸಿದ್ದರೆ, ಈ ಬಾರಿ 19 ಮಂದಿ ಕಣದಲ್ಲಿದ್ದಾರೆ.

25 ರಿಂದ 30ರ ನಡುವಿನ ವಯಸ್ಸಿನ ಅಭ್ಯರ್ಥಿಗಳ ಸಂಖ್ಯೆಯು 2020ರಲ್ಲಿ 57 ಇತ್ತು. ಈ ಬಾರಿ 46ಕ್ಕೆ ಇಳಿಕೆಯಾಗಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದೆ. ಫೆಬ್ರುವರಿ 8 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.