ADVERTISEMENT

ಏಕಕಾಲದಲ್ಲಿ ಎರಡು ಪದವಿ: ಯುಜಿಸಿ ಅಧಿಸೂಚನೆ

ಪಿಟಿಐ
Published 1 ಅಕ್ಟೋಬರ್ 2022, 3:14 IST
Last Updated 1 ಅಕ್ಟೋಬರ್ 2022, 3:14 IST
   

ನವದೆಹಲಿ: ಏಕಕಾಲದಲ್ಲಿ ಎರಡು ಪದವಿ ಪಡೆಯಲು ಅನುವಾಗುವಂತೆ ನಿಯಮಗಳಿಗೆ ಶಾಸನಬದ್ಧ ಬದಲಾವಣೆ ಮಾಡಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಶುಕ್ರವಾರ ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚಿಸಿದೆ.

ಯುಜಿಸಿ ಕಳೆದ ಏಪ್ರಿಲ್‌ ತಿಂಗಳಲ್ಲಿ ವಿದ್ಯಾರ್ಥಿಗಳು ಏಕಕಾಲದಲ್ಲಿ ಪೂರ್ಣಪ್ರಮಾಣದಲ್ಲಿ ಎರಡು ಪದವಿ ಕೋರ್ಸ್ ಅಧ್ಯಯನ ನಡೆಸಲು ಅವಕಾಶ ಕಲ್ಪಿಸುವ ಪ್ರಸ್ತಾವಕ್ಕೆ ಅನುಮೋದನೆ ನೀಡಿತ್ತು. ಈ ಸಂಬಂಧಿತ ಮಾರ್ಗದರ್ಶಿ ಸೂತ್ರಗಳ ಕುರಿತು
ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಎಲ್ಲ ಉನ್ನತ ಶಿಕ್ಷಣದ ಸಂಸ್ಥೆಗಳು ತಮ್ಮ ಶಾಸನಬದ್ಧ ಸಮಿತಿಗಳ ಮೂಲಕ ಪೂರಕವಾಗಿ ಅಗತ್ಯ ಬದಲಾವಣೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳ ಹಿತಾಸಕ್ತಿ ದೃಷ್ಟಿಯಿಂದ ಇದು ಅಗತ್ಯ. ಆದಷ್ಟು ಬೇಗ ಈ ನಿಟ್ಟಿನಲ್ಲಿಕ್ರಮವಹಿಸಬೇಕು ಎಂದು ಯುಜಿಸಿ ಪತ್ರದಲ್ಲಿ ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.