ADVERTISEMENT

ರಾಜ್ಯದ ಜನರಿಗೆ ಉಚಿತ ಕೋವಿಡ್‌ ಲಸಿಕೆ ನೀಡಲು ಸಿದ್ಧತೆ: ಮಮತಾ ಬ್ಯಾನರ್ಜಿ

ಪಿಟಿಐ
Published 10 ಜನವರಿ 2021, 10:40 IST
Last Updated 10 ಜನವರಿ 2021, 10:40 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತ: ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದ ಎಲ್ಲ ಜನರಿಗೆ ಕೋವಿಡ್‌ ಲಸಿಕೆಯನ್ನು ಉಚಿತವಾಗಿ ನೀಡಲು ಸಿದ್ಧತೆಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಿಳಿಸಿದರು.

ಪೊಲೀಸರು, ಗೃಹರಕ್ಷಕ ದಳದವರು, ಸ್ವಯಂಸೇವಕರು, ವಿಪತ್ತು ನಿರ್ವಹಣಾಸಿಬ್ಬಂದಿ– ಇವರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾಗುವುದು ಎಂದು ಮಮತಾ ಬ್ಯಾನರ್ಜಿ ಅವರು ಆರೋಗ್ಯ ಕಾರ್ಯಕರ್ತರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಸರ್ಕಾರವು ರಾಜ್ಯದ ಎಲ್ಲ ಜನರಿಗೆ ಕೋವಿಡ್‌ ಲಸಿಕೆಯನ್ನು ಉಚಿತವಾಗಿ ನೀಡಲು ಸಿದ್ಧತೆಗಳನ್ನು ಮಾಡುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.