ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಲ್ದಾ ಜಿಲ್ಲೆಯ ಕಲೈಚಕ್ ಎಂಬಲ್ಲಿ ಬಾಂಬ್ ಮಾದರಿಯ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಐವರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಕ್ಕಳು 8ರಿಂದ 12ರ ವಯೋಮಾನದವರಾಗಿದ್ದು, ದಿರಗನಗರ ಎಂಬಲ್ಲಿ ಪಾಳು ಬಿದ್ದ ಮನೆಯ ಆವರಣಲ್ಲಿ ಆಡುತ್ತಿದ್ದರು. ಕುತೂಹಲದಿಂದ ವಸ್ತುವನ್ನು ಒದ್ದಾಗ ಅದು ಸ್ಫೋಟಗೊಂಡು ಐವರು ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದಾರೆ.
ಗಾಯಗೊಂಡ ಮಕ್ಕಳನ್ನು ಸೀಲಂಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದು, ಆರೋಗ್ಯ ಸ್ಥಿರವಾಗಿದೆ. ಈ ಪಾಳುಬಿದ್ದ ಕಟ್ಟಡದಲ್ಲಿ ಸ್ಫೋಟಕ ವಸ್ತು ಹೇಗೆ ಬಂತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅ ಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.