ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ 7 ಆರೋಪಿಗಳನ್ನು ಖುಲಾಸೆಗೊಳಿಸಿ ಇಲ್ಲಿನ ವಿಶೇಷ ನ್ಯಾಯಾಲಯ ಆದೇಶಿಸಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಪ್ರಕರಣಗಳ ವಿಚಾರಣೆಗೆ ನಿಯೋಜನೆಗೊಂಡಿರುವ ವಿಶೇಷ ನ್ಯಾಯಾಧೀಶ ಎ.ಕೆ. ಲಹೋಟಿ ಅವರು, ಪ್ರಕರಣ ಮತ್ತು ತನಿಖೆಯಲ್ಲಿ ಹಲವಾರು ಲೋಪದೋಷಗಳನ್ನು ಗುರುತಿಸಿದ್ದಾರೆ. ಆರೋಪಿಗಳು ಅನುಮಾನ ಆಧರಿಸಿದ ಲಾಭಕ್ಕೆ ಅರ್ಹರು ಎಂದು ಹೇಳಿದ್ದಾರೆ.
2008ರ ಸೆಪ್ಟೆಂಬರ್ 29 ರಂದು ಮುಂಬೈನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಮಾಲೆಗಾಂವ್ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್‌ಗೆ ಕಟ್ಟಲಾಗಿದ್ದ ಸ್ಫೋಟಕ ಸಾಧನ ಸ್ಫೋಟಗೊಂಡು ಆರು ಜನರು ಸಾವಿಗೀಡಾದರೆ, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ತೀರ್ಪನ್ನು ಓದುವಾಗ ನ್ಯಾಯಾಧೀಶರು, ಪ್ರಕರಣವನ್ನು ಅನುಮಾನ ಮೀರಿ ಸಾಬೀತುಪಡಿಸಲು ಪ್ರಾಸಿಕೂಷನ್ ಬಳಿ ಯಾವುದೇ ವಿಶ್ವಾಸಾರ್ಹ ಮತ್ತು ಬಲವಾದ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.
ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯ (ಯುಎಪಿಎ) ನಿಬಂಧನೆಗಳು ಈ ಪ್ರಕರಣಕ್ಕೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.