ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ
ಬೆಂಗಳೂರು: ಅಯೋಧ್ಯೆಯಲ್ಲಿ 2024ರ ಜ.22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಬರುವಂತೆ ಐಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಅವರಿಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನ ನೀಡಿದೆ.
ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ‘ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.
ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಭಾಗವಹಿಸುವುದಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.