ADVERTISEMENT

ಸಂಸತ್ ಭವನದ ಮಕರ ದ್ವಾರದ ಬಳಿ BJP ಸಂಸದರಿಂದ ನನ್ನ ಮೇಲೆ ಹಲ್ಲೆ: ಖರ್ಗೆ

ಪಿಟಿಐ
Published 19 ಡಿಸೆಂಬರ್ 2024, 9:10 IST
Last Updated 19 ಡಿಸೆಂಬರ್ 2024, 9:10 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರನ್ನು ತಮ್ಮನ್ನು ತಳ್ಳಿದ್ದಾರೆ, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.

‘ಇದು ನನ್ನ ಮೇಲೆ ನಡೆದ ಹಲ್ಲೆಯಲ್ಲ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಮೇಲೆ ನಡೆದ ಹಲ್ಲೆ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಸಂಸತ್ ಭವನದ ಮಕರ ದ್ವಾರದ ಬಳಿ ಬಿಜೆಪಿಯ ಸಂಸದರನ್ನು ನನ್ನನ್ನು ತಳ್ಳಿದ್ದಾರೆ. ನಿಯಂತ್ರಣ ತಪ್ಪಿ ನಾನು ಬಿದ್ದೆ. ಇದರಿಂದ ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನನ್ನ ಮೊಣಕಾಲುಗಳಿಗೆ ಗಾಯ ಉಂಟಾಗಿದೆ’ ಎಂದು ಖರ್ಗೆ ಹೇಳಿದ್ದಾರೆ.

ADVERTISEMENT

ಕೂಡಲೇ ಕಾಂಗ್ರೆಸ್ ಸಂಸದರು ಕುರ್ಚಿ ತಂದು ನನ್ನನ್ನು ಕೂರಿಸಿದರು. ಭಾರಿ ಕಷ್ಟದಿಂದ, ನನ್ನ ಸಹೋದ್ಯೋಗಿಗಳ ನೆರವಿನಿಂದ ಬೆಳಿಗ್ಗೆ 11 ಗಂಟೆಗೆ ಕುಂಟುತ್ತಾ ಸದನಕ್ಕೆ ಬಂದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಅಗ್ರಹಿಸಿದ್ದಾರೆ.

ಲೋಕಸಭೆ ಸ್ಪೀಕರ್‌ಗೆ ಬರೆದಿರುವ ಪತ್ರವನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಸಂಸತ್‌ ಭವನದ ಬಳಿ ಆಡಳಿತ‍ ಪಕ್ಷ ಹಾಗೂ ವಿರೋಧ ಪಕ್ಷಗಳ ಸಂಸದರ ನಡುವೆ ಮುಖಾಮುಖಿ ನಡೆದು ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಗಾಯಗೊಂಡಿದ್ದಾರೆ. ರಾಹುಲ್ ಗಾಂಧಿ ತಳ್ಳಿದ್ದರಿಂದ ಗಾಯ ಉಂಟಾಗಿದೆ ಎಂದು ಬಿಜೆಪಿ ಸಂಸದರು ಆರೋಪಿಸಿದ್ದಾರೆ. ಆದರೆ ಈ ಆರೋಪ‍ವನ್ನು ರಾಹುಲ್ ಗಾಂಧಿ ಅಲ್ಲಗೆಳದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.