ADVERTISEMENT

ಮಹಾರಾಷ್ಟ್ರ ರಾಜ್ಯಪಾಲರಿಂದ ಬಿಜೆಪಿಗೆ ನೆರವು: ಮಲ್ಲಿಕಾರ್ಜುನ ಖರ್ಗೆ ಟೀಕೆ

ಏಜೆನ್ಸೀಸ್
Published 17 ನವೆಂಬರ್ 2019, 9:19 IST
Last Updated 17 ನವೆಂಬರ್ 2019, 9:19 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ಬೆಂಗಳೂರು:ಮಹಾರಾಷ್ಟ್ರ ಸರ್ಕಾರ ರಚನೆ ವಿಚಾರದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಬಿಜೆಪಿಗೆ ನೆರವಾಗಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಆರೋಪಿಸಿದ್ದಾರೆ.

ಬಿಜೆಪಿಗೆ ನೆರವಾಗುವ ಸಲುವಾಗಿ ರಾಜ್ಯಪಾಲರು ಶಿವಸೇನಾ ಮತ್ತು ಎನ್‌ಸಿಪಿಗೆ ಸಾಕಷ್ಟು ಸಮಯಾವಕಾಶ ನೀಡಲಿಲ್ಲ. ಕಾಂಗ್ರೆಸ್‌ಗೆ ಹಕ್ಕು ಮಂಡನೆಗೆ ಅವಕಾಶವನ್ನೇ ನೀಡಲಿಲ್ಲ. ಶಿವಸೇನಾಗೆ 48 ಗಂಟೆ ಕಾಲಾವಕಾಶ ನೀಡಲಾಗಿಲ್ಲ. ಸಾಂವಿಧಾನಿಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ತೋರ್ಪಡಿಸಿಕೊಳ್ಳಲಷ್ಟೇಅವರು ಪ್ರಕ್ರಿಯೆಗಳನ್ನು ನೆರವೇರಿಸಿದರು ಎಂದು ಖರ್ಗೆ ಟೀಕಿಸಿದ್ದಾರೆ.

ಕಾಂಗ್ರೆಸ್‌ಗೆ ಸರ್ಕಾರ ರಚನೆಗೆ ಆಹ್ವಾನವನ್ನೇ ನೀಡದೆ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಲಾಗಿತ್ತು.

ಮೈತ್ರಿ ಮೂಲಕ ಚುನಾವಣೆ ಎದುರಿಸಿದ್ದ ಬಿಜೆಪಿ–ಶಿವಸೇನಾ ನಂತರ ಅಧಿಕಾರ ಹಂಚಿಕೆ ವಿಚಾರದಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದ ಮೈತ್ರಿಯನ್ನೇ ಕಡಿದುಕೊಂಡಿವೆ. ಪರಿಣಾಮವಾಗಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ. ಇದೀಗ ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್ ಜತೆಯಾಗಿ ಸರ್ಕಾರ ರಚಿಸಲು ಮುಂದಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.