ADVERTISEMENT

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಅಕ್ಟೋಬರ್ 2022, 6:36 IST
Last Updated 1 ಅಕ್ಟೋಬರ್ 2022, 6:36 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ:ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಇಂದು (ಶನಿವಾರ) ರಾಜೀನಾಮೆ ಸಲ್ಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಬ್ಬರಿಗೆ ಒಂದೇ ಹುದ್ದೆ’ ನಿಯಮ ಅನ್ವಯ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜೀನಾಮೆ ಪ್ರತಿಯನ್ನು ಸೋನಿಯಾ ಗಾಂಧಿಯವರಿಗೆ ಕಳುಹಿಸಲಾಗಿದೆ’ ಎಂದರು.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಅಭ್ಯರ್ಥಿಯಾಗಿ ಖರ್ಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಶಶಿ ತರೂರ್ ಮತ್ತು ಕೆ.ಎನ್‌.ತ್ರಿಪಾಠಿ ಪ್ರತಿಸ್ಪರ್ಧಿಗಳಾಗಿದ್ದಾರೆ.

ADVERTISEMENT

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿತ್ತು. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅ.19ರಂದು ಫಲಿತಾಂಶ ಹೊರಬೀಳಲಿದೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.