ADVERTISEMENT

ಜಿ–23 ನಾಯಕರಿಂದ ಪಕ್ಷ ಒಡೆಯಲು ಯತ್ನ: ಖರ್ಗೆ

ಪಿಟಿಐ
Published 16 ಮಾರ್ಚ್ 2022, 22:28 IST
Last Updated 16 ಮಾರ್ಚ್ 2022, 22:28 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ:ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಕಪಿಲ್‌ ಸಿಬಲ್‌ ವಿರುದ್ಧ ಬುಧವಾರ ಹರಿಹಾಯ್ದಿದ್ದಾರೆ.

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ (ಸಿಡಬ್ಲ್ಯುಸಿ) ಬಳಿಕವೂ ಮೇಲಿಂದ ಮೇಲೆ ಸಭೆಗಳನ್ನು ನಡೆಸುವ ಮೂಲಕ ಜಿ–23 (ಕಾಂಗ್ರೆಸ್ ಭಿನ್ನಮತೀಯರು) ನಾಯಕರು ಕಾಂಗ್ರೆಸ್‌ ಅನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಗುಲಾಮ್‌ ನಬಿ ಆಜಾದ್‌ ಅವರ ನಿವಾಸದಲ್ಲಿ ಸಭೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

‘ಅವರು 100 ಸಭೆಗಳನ್ನು ಆಯೋಜಿಸಿದರೂ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಅವರನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ.ಬೀದಿಗಳಿಂದ ರಾಷ್ಟ್ರ ರಾಜಧಾನಿವರೆಗೆ ಕಾಂಗ್ರೆಸ್‌ ಅವರ ಜೊತೆ ಇದೆ’ ಎಂದು ಅವರು ಹೇಳಿದ್ದಾರೆ. ‘ಕಪಿಲ್‌ ಸಿಬಲ್‌ ಅವರು ಯಾವ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ?’ ಎಂದುಸಲ್ಮಾನ್ ಖುರ್ಷಿದ್ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.