ADVERTISEMENT

ಸ್ವಾತಂತ್ರ್ಯದಿನಾಚರಣೆ | ಕೆಂಪು ಕೋಟೆಗೆ ಖರ್ಗೆ ಗೈರು: ಅವರು ಕೊಟ್ಟ ಕಾರಣಗಳೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಆಗಸ್ಟ್ 2023, 10:08 IST
Last Updated 15 ಆಗಸ್ಟ್ 2023, 10:08 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನದ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೈರಾಗಿರುವುದಕ್ಕೆ ಕಾರಣಗಳನ್ನು ನೀಡಿದ್ದಾರೆ.

ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಗೈರಾಗಿದ್ದರು. ಅವರಿಗಾಗಿ ಮೀಸಲಿಟ್ಟಿದ್ದ ಕುರ್ಚಿ ಖಾಲಿ ಇತ್ತು. ಇದರ ಫೋಟೊವನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನನಗೆ ಕಣ್ಣಿನ ಸಮಸ್ಯೆ ಇತ್ತು ಹಾಗೂ ನಿವಾಸ ಮತ್ತು ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ಮಾಡಬೇಕಾಗಿತ್ತು. ಸಮಯದ ಅಭಾವ ಹಾಗೂ ಭದ್ರತಾ ಕಾರಣಗಳಿಂದ ಕೆಂಪು ಕೋಟೆಗೆ ಹೋಗಿ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ADVERTISEMENT

ಈ ಕಾರಣಗಳಿಂದಾಗಿ ನಾನು ಕೆಂಪು ಕೋಟೆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಖರ್ಗೆ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.