
ಕೋಲ್ಕತ್ತ (ಪಿಟಿಐ): ‘ಚುನಾವಣಾ ಆಯೋಗವು ವಿರೋಧ ಪಕ್ಷಗಳನ್ನು ವ್ಯವಸ್ಥಿತವಾಗಿ ದಮನ ಮಾಡುತ್ತಿದೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾನುವಾರ ಕಿಡಿಕಾರಿದ್ದಾರೆ.
ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ‘ದುರಂತ ಪ್ರಹಸನ’ ಎಂದು ಜರಿದಿರುವ ಅವರು, ‘ಆಯೋಗವು ಬಿಜೆಪಿ ಪರವಾಗಿ ದೇಶದ ಪ್ರಜಾಪ್ರಭುತ್ವದ ಅಡಿಪಾಯವನ್ನೇ ನಾಶಪಡಿಸುತ್ತಿದೆ’ ಎಂದು ಆರೋಪಿಸಿದ್ದಾರೆ.
‘ಆಯೋಗವು ತನ್ನ ಯಜಮಾನನ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ. ಜನರ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳುವಲ್ಲಿ ನಿರತವಾಗಿದೆ’ ಎಂದು ದೂರಿದ್ದಾರೆ.
‘ರಾಷ್ಟ್ರೀಯ ಮತದಾರರ ದಿನ ಆಚರಿಸಲು ಆಯೋಗಕ್ಕೆ ಯಾವ ನೈತಿಕತೆ ಇದೆ, ಧೈರ್ಯವಿದೆ’ ಎಂದು ‘ಎಕ್ಸ್’ನಲ್ಲಿ ಪ್ರಶ್ನಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಆತುರವಾಗಿ ಮಾಡಲಾಗುತ್ತಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.