
ಕೋಲ್ಕತ್ತ: ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ ಇಲ್ಲಿಯವರೆಗೆ ನಡೆಸಿದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಭಾರಿ ತಪ್ಪು’ಗಳಾಗಿವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ನೇತಾಜಿ ಒಳಾಂಗಣ ಸ್ಟೇಡಿಯಂನಲ್ಲಿ ಟಿಎಂಸಿಯ ಬೂತ್ ಮಟ್ಟದ ಏಜೆಂಟ್‌ಗಳ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ಗಮನಕ್ಕೆ ತರದೆ ಚುನಾವಣಾ ಆಯೋಗವು ವೀಕ್ಷಕರನ್ನು ನೇಮಿಸುತ್ತಿದೆ. ಅದು ಬಿಜೆಪಿಯ ಹಿತಾಸಕ್ತಿಗಳನ್ನು ಪೋಷಿಸಲು, ಅದರ ನಿರ್ದೇಶನದಂತೆ ಮಾತ್ರ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ.
‘ಎಸ್‌ಐಆರ್ ವಿಚಾರಣೆಗಳಿಗೆ ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರದ ಅಧಿಕಾರಿಗಳಿಗೆ ಸ್ಥಳೀಯ ಭಾಷೆಯ ಬಗ್ಗೆ ಸರಿಯಾದ ಜ್ಞಾನವಿಲ್ಲ. ಈಗಾಗಲೇ ನಡೆಯುತ್ತಿರುವ ಪರಿಷ್ಕರಣಾ ಕಾರ್ಯದ ಎರಡನೇ ಹಂತದಲ್ಲಿ ಪರಿಶೀಲನೆಗಳನ್ನು ನಡೆಸಲು ಅವರು ಅನರ್ಹರು’ ಎಂದು ಮಮತಾ ಪ್ರತಿಪಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.