
ಪ್ರಜಾವಾಣಿ ವಾರ್ತೆ
ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪ್ರಾರ್ಥಿಸಿದ್ದಾರೆ.
1955ರಲ್ಲಿ ಜನಿಸಿರುವ ಮಮತಾ ಅವರು ಪಶ್ಚಿಮ ಬಂಗಾಳದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿದ್ದು, ಮೂರು ಬಾರಿ ಸಿ.ಎಂ ಆಗಿದ್ದಾರೆ. ಏಳು ಬಾರಿ ಲೋಕಸಭಾ ಸದಸ್ಯರಾಗಿರುವ ಅವರು ಕೇಂದ್ರ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.