ADVERTISEMENT

ಕೇಂದ್ರದಿಂದ ಭಾರತದ ಒಕ್ಕೂಟ ವ್ಯವಸ್ಥೆ ಮೇಲೆ ಸರ್ಜಿಕಲ್ ಸ್ಟ್ರೈಕ್: ಮಮತಾ

ಏಜೆನ್ಸೀಸ್
Published 19 ಮಾರ್ಚ್ 2021, 6:24 IST
Last Updated 19 ಮಾರ್ಚ್ 2021, 6:24 IST
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ   

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ 2021ರ ದೆಹಲಿ ಸರಕಾರ ರಾಷ್ಟ್ರೀಯ ರಾಜಧಾನಿ ವಲಯ (ತಿದ್ದುಪಡಿ) ವಿಧೇಯಕವು ಭಾರತದ ಒಕ್ಕೂಟ ವ್ಯವಸ್ಥೆ ಮೇಲೆಮಾಡಿರುವ 'ಸರ್ಜಿಕಲ್ ಸ್ಟೈಕ್' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಅಲ್ಲದೆ ಕೇಂದ್ರ ಸರ್ಕಾರದ ಜಿಎನ್‌ಸಿಟಿಡಿ ಕಾಯ್ದೆಯ ಪ್ರಸ್ತಾವಿತ ತಿದ್ದುಪಡಿಗಳ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.

ಈ ಕುರಿತು ದೆಹಲಿ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಮಮತಾ, ಕೇಂದ್ರ ಸರ್ಕಾರದ ಈ ಕ್ರಮವು ಭಾರತದ ಒಕ್ಕೂಟ ವ್ಯವಸ್ಥೆಮೇಲೆಮಾಡಿರುವ ಸರ್ಜಿಕಲ್ ಸ್ಟೈಕ್ ಆಗಿದೆ ಎಂದು ಆರೋಪಿಸಿದರು.

ADVERTISEMENT

ಕೇಂದ್ರ ಬಿಜೆಪಿ ಸರ್ಕಾರವು 2021 ದೆಹಲಿ ಸರಕಾರ ರಾಷ್ಟ್ರೀಯ ರಾಜಧಾನಿ ವಲಯ (ತಿದ್ದುಪಡಿ) ವಿಧೇಯಕವನ್ನು ಮಾರ್ಚ್ 15ರಂದು ಮಂಡಿಸಿತ್ತು.

ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಪಿಪಿ) ಪಕ್ಷದಿಂದ ಹೀನಾಯ ಹಾಗೂ ಅವಮಾನಕರ ಸೋಲನ್ನು ಅರಗಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಮೂಲಕ ದೆಹಲಿಯನ್ನು ಆಳಲು ಮುಂದಾಗಿದೆ. ಇದುವೇ ಜಿಎನ್‌ಸಿಟಿಡಿ ಕಾಯ್ದೆಯ ಪ್ರಸ್ತಾವಿತ ತಿದ್ದುಪಡಿಗಳ ನೈಜ ಉದ್ದೇಶ ಎಂದು ಉಲ್ಲೇಖಿಸಿದ್ದಾರೆ.

ಮಮತಾ ಬ್ಯಾನರ್ಜಿ ಪತ್ರಕ್ಕೆ ಟ್ವೀಟ್ ಮೂಲಕ ಉತ್ತರ ನೀಡಿರುವ ಕೇಜ್ರಿವಾಲ್, ದೆಹಲಿಯ ಜನತೆಗೆ ದೃಢವಾದ ಬೆಂಬಲ ನೀಡಿರುವುದಕ್ಕೆ ದೀದಿ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

2021ರ ದೆಹಲಿ ಸರಕಾರ ರಾಷ್ಟ್ರೀಯ ರಾಜಧಾನಿ ವಲಯ (ತಿದ್ದುಪಡಿ) ವಿಧೇಯಕದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚುವರಿ ಅಧಿಕಾರವನ್ನು ನೀಡಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಇದರಂತೆ ದೆಹಲಿ ಸರ್ಕಾರ ಯಾವುದೇ ಕಾಯ್ದೆ ರಚಿಸುವ ಮುನ್ನ ಲೆಫ್ಟಿನೆಂಟ್ ಗರ್ವನರ್ ಅಭಿಪ್ರಾಯ ಸಂಗ್ರಹಿಸುವುದು ಅನಿವಾರ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.