ADVERTISEMENT

ಜುಲೈ 27 ರಂದು ನೀತಿ ಆಯೋಗದ ಸಭೆ: ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಪಿಟಿಐ
Published 19 ಜುಲೈ 2024, 11:00 IST
Last Updated 19 ಜುಲೈ 2024, 11:00 IST
   

ಕೋಲ್ಕತ್ತ: ಮುಂದಿನ ವಾರ ನವದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಜುಲೈ 25ರಂದು ಅವರು ದೆಹಲಿಗೆ ತೆರಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಜುಲೈ 27 ರಂದು ನಡೆಯಲಿರುವ ನೀತಿ ಆಯೋಗದ ಆಡಳಿತ ಮಂಡಳಿಯ 9ನೇ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಹಿಸಲಿದ್ದಾರೆ.

ADVERTISEMENT

ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು, ಗ್ರಾಮೀಣ ವಸತಿ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಎಂಜಿಎನ್‌ಆರ್‌ಇಜಿಎ)ಗೆ ರಾಜ್ಯಕ್ಕೆ ಕೇಂದ್ರದಿಂದ ಬಿಡುಗಡೆಯಾಗಬೇಕಿದ್ದ ಬಾಕಿ ಹಣದ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ತಂಗಿರುವ ವೇಳೆ ಅವರು, ಪಕ್ಷದ ಸಂಸದರು ಮತ್ತು 'ಇಂಡಿಯಾ' ಬಣದ ಇತರ ಹಿರಿಯ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.