ಮಮತಾ ಬ್ಯಾನರ್ಜಿ
– ಪಿಟಿಐ ಚಿತ್ರ
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಅಲ್ಪಸಂಖ್ಯಾತರು ಮತ್ತು ಅವರ ಆಸ್ತಿಗಳನ್ನು ರಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದರು.
ವಕ್ಫ್ (ತಿದ್ದುಪಡಿ) ಕಾಯ್ದೆ ಜಾರಿಯಿಂದ ಮುಸ್ಲಿಮರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ ಅವರು, ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದವರ ರಕ್ಷಣೆಗೆ ಸರ್ಕಾರ ನಿಲ್ಲಲಿದೆ ಎಂದು ಭರವಸೆ ನೀಡಿದರು.
ಇಲ್ಲಿನ ಜೈನ ಸಮುದಾಯದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ರಾಜ್ಯದಲ್ಲಿ ವಿಭಜಕ ನೀತಿಯನ್ನು ಮುಂದುವರಿಯಲು ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ದೇಶದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ಜಾರಿ ಬರಬಾರದಿತ್ತು, ಇದರಿಂದ ಅಲ್ಪಸಂಖ್ಯಾತ ಸಮುದಾಯದವರಿಗೆ ಅನ್ಯಾಯವಾಗಲಿದೆ ಎಂದು ಅವರು ಪ್ರತಿಪಾದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.