
ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಬ್ಯಾನರ್ಜಿ ಜನವರಿ 28ರಂದು ಅರ್ಜಿ ಸಲ್ಲಿಸಿದ್ದು, ಚುನಾವಣಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿಯನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.
ಅವರ ಅರ್ಜಿಯನ್ನು ವಿಚಾರಣೆಗೆ ಇನ್ನಷ್ಟೇ ಪಟ್ಟಿ ಮಾಡಬೇಕಾಗಿದೆ. ಎಸ್‌ಐಆರ್ ಕುರಿತ ಹಲವಾರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಈಗಾಗಲೇ ವಿಚಾರಣೆ ನಡೆಸುತ್ತಿದೆ.
‘ಬಂಗಾಳದಲ್ಲಿ ನಡೆಯುತ್ತಿರುವ ಎಸ್‌ಐಆರ್ ‘ದೋಷಪೂರಿತ’ವಾಗಿದ್ದು, ಇಡೀ ಪ್ರಕ್ರಿಯೆಯನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿ ಮಮತಾ ಅವರು ಈ ಹಿಂದೆ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.