
ಕೋಲ್ಕತ್ತ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿರುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಂಡಿಸಿದ್ದಾರೆ.
ಹಿಂಸಾಚಾರ ಮತ್ತು ಉಗ್ರವಾದವನ್ನು ಒಪ್ಪಲಾಗದು ಎಂದು ಅವರು ಹೇಳಿದ್ದಾರೆ.
‘ಏನೇ ಆಗಿರಲಿ. ಹಿಂಸೆ ಮತ್ತು ಭಯೋತ್ಪಾದನೆಯನ್ನು ಒಪ್ಪಲಾಗದು. ಉದಯಪುರದಲ್ಲಿ ನಡೆದ ಹತ್ಯೆಯನ್ನುತೀವ್ರವಾಗಿ ಖಂಡಿಸುತ್ತೇನೆ. ಕಾನೂನು ಕ್ರಮ ಕೈಗೊಳ್ಳಲಿದೆ. ಎಲ್ಲರೂ ಶಾಂತಿ ಕಾಪಾಡಬೇಕು’ ಎಂದು ಮಮತಾ ಟ್ವೀಟ್ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್‌ರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.