ಮಮತಾ ಬ್ಯಾನರ್ಜಿ
– ಪಿಟಿಐ ಚಿತ್ರ
ಕೋಲ್ಕತ್ತ : ನಾಲ್ವರು ಅಧಿಕಾರಿಗಳನ್ನು ಚುನಾವಣಾ ಆಯೋಗವು ಅಮಾನತು ಮಾಡಿರುವುದನ್ನು ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ‘ಸರ್ಕಾರವು ನಮ್ಮ ನೌಕರರೊಂದಿಗೆ ಇದೆ’ ಎಂದು ಗುರುವಾರ ಹೇಳಿದರು.
ಎರಡು ಜಿಲ್ಲೆಗಳಲ್ಲಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಾಗ ದೋಷ ಎಸಗಿದ ಹಾಗೂ ಕರ್ತವ್ಯಲೋಪದ
ಆರೋಪದ ಮೇಲೆ ಇಬ್ಬರು ಅಧಿಕಾರಿಗಳು ಸೇರಿ ನಾಲ್ವರನ್ನು ಅಮಾನತುಗೊಳಿಸಿ ಆಯೋಗವು ಮಂಗಳವಾರ ಆದೇಶ ಹೊರಡಿಸಿತ್ತು.
ಇಬ್ಬರು ಮತದಾರರ ನೋಂದಣಿ ಅಧಿಕಾರಿಗಳು, ಇಬ್ಬರು ಸಹಾಯಕ ನೋಂದಣಿ ಅಧಿಕಾರಿಗಳು ಮತ್ತು ಒಬ್ಬ ಡೇಟಾ ಎಂಟ್ರಿ ಆಪರೇಟರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆಯೂ ಆಯೋಗದ ಸಮಿತಿಯು ನಿರ್ದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.