ADVERTISEMENT

ಸಿದ್ದರಾಮಯ್ಯ–ಡಿಕೆ ಶಿವಕುಮಾರ್‌ ಪ್ರಮಾಣವಚನ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ ಗೈರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಮೇ 2023, 10:05 IST
Last Updated 19 ಮೇ 2023, 10:05 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ಕಾಂಗ್ರೆಸ್‌ ಉದ್ದೇಶಿಸಿದೆ. ಸಮಾರಂಭದಲ್ಲಿ ವಿರೋಧ ಪಕ್ಷಗಳ ಶಕ್ತಿಪ್ರದರ್ಶನ ಮಾಡಲೂ ಮುಂದಾಗಿದೆ. ಈ ನಡುವೆ ಈ ಕಾರ್ಯಕ್ರಮಕ್ಕೆ ತಮಗೆ ಬರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಅವರ ಬದಲಾಗಿ ಲೋಕಸಭೆಯಲ್ಲಿ ಟಿಎಂಸಿಯ ಉಪನಾಯಕ ಕಕೋಲಿ ಘೋಷ್‌ ದಸ್ತಿದಾರ್‌ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

‘ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಹೋದ್ಯೋಗಿಗಳು ತೃಣಮೂಲ ಕಾಂಗ್ರೆಸ್‌ನ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು, ನಾಳೆ ನಡೆಯುವ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಮಮತಾ ಬ್ಯಾನರ್ಜಿ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಉಪನಾಯಕ ಡಾ. ಕಕೋಲಿ ಘೋಷ್‌ ದಸ್ತಿದಾರ್‌ ಅವರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ‘ ಎಂದು ಟಿಎಂಸಿ ನಾಯಕ ಡೆರೆಕ್‌ ಓಬ್ರಿಯಾನ್‌ ಟ್ವೀಟ್‌ ಮಾಡಿದ್ದಾರೆ.

ADVERTISEMENT
ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್‌ ಬಘೇಲ್, ರಾಜಸ್ಥಾನ ಮುಖ್ಯಮಂತ್ರಿ ಆಶೋಕ್‌ ಗೆಹಲೋತ್‌, ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್‌ ಸಿಂಗ್‌ ಸುಖು, ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌, ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್‌, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌, ನ್ಯಾಶನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರನ್ನು ಕಾಂಗ್ರೆಸ್‌ ಆಹ್ವಾನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.