ADVERTISEMENT

ಪಶ್ಚಿಮ ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ನಾಮಪತ್ರ ಸಲ್ಲಿಕೆ ಇಂದು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಸೆಪ್ಟೆಂಬರ್ 2021, 1:31 IST
Last Updated 10 ಸೆಪ್ಟೆಂಬರ್ 2021, 1:31 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತ: ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಲಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು. ಸೆ.30ರಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್‌ ನಿರ್ಧರಿಸಿದೆ. ಅಕ್ಟೋಬರ್‌ 3ರಂದು ಫಲಿತಾಂಶ ಪ್ರಕಟವಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.