ADVERTISEMENT

ಕೋವಿಡ್ ಬದಲು ಕೇಂದ್ರದ ವಿರುದ್ಧ ಹೋರಾಟದಲ್ಲಿ ವ್ಯಸ್ತರಾಗಿದ್ದಾರೆ ಮಮತಾ: ಬಿಜೆಪಿ

ಏಜೆನ್ಸೀಸ್
Published 17 ಜುಲೈ 2020, 3:01 IST
Last Updated 17 ಜುಲೈ 2020, 3:01 IST
ದಿಲೀಪ್ ಘೋಷ್ (ಎಎನ್‌ಐ ಸಂಗ್ರಹ ಚಿತ್ರ)
ದಿಲೀಪ್ ಘೋಷ್ (ಎಎನ್‌ಐ ಸಂಗ್ರಹ ಚಿತ್ರ)   

ಕೋಲ್ಕತ್ತ: ಕೊರೊನಾ ವೈರಸ್ ಸಾಂಕ್ರಾಮಿಕದ ವಿರುದ್ಧ ಹೋರಾಡುವ ಬದಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರ ವಿರುದ್ಧ ಹೋರಾಡುವುದರಲ್ಲಿ ವ್ಯಸ್ತರಾಗಿದ್ದಾರೆ ಎಂದು ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಟೀಕಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಅಂಪನ್ ಚಂಡಮಾರುತದಿಂದಾದ ಹಾನಿ ಮತ್ತು ಕೋವಿಡ್‌ನಿಂದಾಗಿ ರಾಜ್ಯವು ತೀವ್ರ ಬಿಕ್ಕಟ್ಟಿಗೆ ಸಿಲುಕಿದೆ. ಜನರು ತೊಂದರೆಗೀಡಾಗಿದ್ದಾರೆ. ಕೊರೊನಾ ವಿರುದ್ಧ ಹೋರಾಡಬೇಕಾದ ಈ ಸಮಯದಲ್ಲಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರ ವಿರುದ್ಧ ಸೆಣಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಜನರಿಗಾಗಿ ಕೆಲಸ ಮಾಡುವ ಬದಲು ಪೊಲೀಸರು ತಮ್ಮ ಪಕ್ಷದ ಕಾರ್ಯಕರ್ತರ ಬೆನ್ನಟ್ಟುತ್ತಿದ್ದಾರೆ. ಅವರ (ಮಮತಾ) ಗೂಂಡಾಗಳು ನಮ್ಮ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿದ್ದಾರೆ. ಒಬ್ಬ ಶಾಸಕನೂ ಸುರಕ್ಷಿತವಾಗಿಲ್ಲ ಎಂದೂ ಅವರು ಹೇಳಿದ್ದಾರೆ.

ADVERTISEMENT

ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಕೊರೊನಾ ಹೆಸರಿನಲ್ಲಿ ಪ್ರಯೋಜನ ಪಡೆದುಕೊಳ್ಳುತ್ತಿವೆ ಎಂದು ಗುರುವಾರ ಮಮತಾ ಆರೋಪಿಸಿದ್ದರು. ಜತೆಗೆ, ಎಲ್ಲ ರಾಜಕೀಯ ಪಕ್ಷಗಳು ಮತ್ತು ವ್ಯಾಪಾರಿ ಒಕ್ಕೂಟಗಳು ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಬೇಕೆಂದು ಕರೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.