ADVERTISEMENT

ಕೇಂದ್ರದ ಧೋರಣೆ ವಿರುದ್ಧ ಮಮತಾ ಧರಣಿ

ಪಿಟಿಐ
Published 3 ಫೆಬ್ರುವರಿ 2019, 20:13 IST
Last Updated 3 ಫೆಬ್ರುವರಿ 2019, 20:13 IST
ಧರಣಿ ನಡೆಸಿದ ಮಮತಾ ಬ್ಯಾನರ್ಜಿ
ಧರಣಿ ನಡೆಸಿದ ಮಮತಾ ಬ್ಯಾನರ್ಜಿ   

ಕೋಲ್ಕತ್ತ: ನಗರ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಪ್ರಶ್ನಿಸಲು ಯತ್ನಿಸಿದ್ದನ್ನು ಖಂಡಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾನುವಾರ ತಡರಾತ್ರಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದರು.

ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಕೇಂದ್ರ ಯತ್ನಿಸುತ್ತಿದೆ ಎಂದು ಆರೋಪಿಸಿದ ಮಮತಾ, ‘ನಾನು ಸಾಯಲು ಸಿದ್ಧಳಿದ್ದೇನೆ. ಆದರೆ ಮೋದಿ ಸರ್ಕಾರದ ಎದುರು ತಲೆತಗ್ಗಿಸಲು ಸಿದ್ಧವಿಲ್ಲ. ತುರ್ತು‍ಪರಿಸ್ಥಿತಿ ಹೇರಲು ಅವಕಾಶ ನೀಡುವುದಿಲ್ಲ’ ಎಂದಿದ್ದಾರೆ.

ಚಿಟ್‌ ಫಂಡ್‌ ಹಗರಣದಲ್ಲಿ ಕೋಲ್ಕತ್ತ ನಗರ ಪೊಲೀಸ್‌ ಕಮಿಷನರ್‌ ರಾಜೀವ್‌ ಕುಮಾರ್‌ ಅವರ ವಿಚಾರಣೆಗೆ ಭಾನುವಾರ ಅವರ ನಿವಾಸಕ್ಕೆ ತೆರಳಿದ್ದ ಸಿಬಿಐ ಅಧಿಕಾರಿಗಳನ್ನೇ ಪೊಲೀಸರು ವಶಕ್ಕೆ ಪಡೆದ ನಾಟಕೀಯ ಮತ್ತು ಅಪರೂಪದ ಘಟನೆ ನಡೆದಿದೆ.

ರೋಸ್‌ ವ್ಯಾಲಿ, ಶಾರದಾ ಚಿಟ್‌ ಫಂಡ್‌ ಹಗರಣಕ್ಕೆ ಸಂಬಂಧಿಸಿದ ಕಡತ ಮತ್ತು ದಾಖಲೆ ಕಣ್ಮರೆಯಾದ ಬಗ್ಗೆ ಪ್ರಶ್ನಿಸಲು ಸಿಬಿಐ ಅಧಿಕಾರಿಗಳ ತಂಡ ಲಂಡನ್‌ ಸ್ಟ್ರೀಟ್‌ನಲ್ಲಿರುವ ಪೊಲೀಸ್‌ ಕಮಿಷನರ್‌ ನಿವಾಸಕ್ಕೆ ತೆರಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.