ADVERTISEMENT

ಯಸ್ ಚಂಡಮಾರುತ: ಪ್ರಧಾನಿ ಮೋದಿ ಭೇಟಿಯಾಗಿ ಹಾನಿಯ ವರದಿ ಒಪ್ಪಿಸಿದ ಮಮತಾ ಬ್ಯಾನರ್ಜಿ

ಪಿಟಿಐ
Published 28 ಮೇ 2021, 11:59 IST
Last Updated 28 ಮೇ 2021, 11:59 IST
ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ – ಪಿಟಿಐ ಚಿತ್ರ
ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ – ಪಿಟಿಐ ಚಿತ್ರ   

ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ‘ಯಸ್’ ಚಂಡಮಾರುತದಿಂದ ರಾಜ್ಯದಲ್ಲಿ ಸಂಭವಿಸಿದ ಹಾನಿಯ ಬಗ್ಗೆ ವರದಿ ಸಲ್ಲಿಸಿದ್ದಾರೆ.

ಪಶ್ಚಿಮ ಮೇದಿನೀಪುರ ಜಿಲ್ಲೆಯ ಕಲಾಯಿಕುಂಡ್‌ನಲ್ಲಿ ಮಮತಾ ಅವರು ಪ್ರಧಾನಿಯನ್ನು ಭೇಟಿಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಮತಾ ಹಾಗೂ ಮೋದಿ 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಚಂಡಮಾರುತದ ಬಳಿಕ ರಾಜ್ಯದ ಸ್ಥಿತಿಗತಿಯ ಬಗ್ಗೆ ಮುಖ್ಯಮಂತ್ರಿಗಳು ಪ್ರಧಾನಿಗೆ ಮಾಹಿತಿ ನೀಡಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಒಡಿಶಾಕ್ಕೆ ಭೇಟಿ ನೀಡಿ ಚಂಡಮಾರುತದಿಂದ ಉಂಟಾಗಿರುವ ಹಾನಿ ಮತ್ತು ಆ ನಂತರದ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದ್ದ ಮೋದಿಯವರು ಬಳಿಕ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.