ADVERTISEMENT

ಮೋದಿಯನ್ನು ಭೇಟಿಯಾದ ಮಮತಾ: ಬಿಎಸ್‌ಎಫ್ ವ್ಯಾಪ್ತಿ ವಿಸ್ತರಣೆ ಹಿಂಪಡೆಯಲು ಒತ್ತಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ನವೆಂಬರ್ 2021, 13:24 IST
Last Updated 24 ನವೆಂಬರ್ 2021, 13:24 IST
ಪಿಎಂಒ ಟ್ವಿಟರ್ ಖಾತೆಯ ಚಿತ್ರ
ಪಿಎಂಒ ಟ್ವಿಟರ್ ಖಾತೆಯ ಚಿತ್ರ   

ನವದೆಹಲಿ: 4 ದಿನಗಳ ದೆಹಲಿ ಪ್ರವಾಸದಲ್ಲಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಭೇಟಿ ವೇಳೆ ತ್ರಿಪುರಾ ಹಿಂಸಾಚಾರ, ಬಿಎಸ್‌ಎಫ್ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ ಮತ್ತು ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದಾಗಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ಇಂದು ನಾನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿರುವೆ. ಬಿಎಸ್ಎಫ್ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆಸಿದ್ದು, ನಿರ್ಧಾರ ಹಿಂಪಡೆಯುವಂತೆ ಒತ್ತಾಯಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.